ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಶೇ. 10 ಕ್ಕಿಂತ ಕೆಳಗಿಳಿದ ಪಾಸಿಟಿವಿಟಿ ದರ, ಇಂದು ಗುಣಮುಖರ ಸಂಖ್ಯೆ 25346

 ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಶೇ. 10 ಕ್ಕಿಂತ ಪಾಸಿಟಿವಿಟಿ ದರ, ಗುಣಮುಖರ ಸಂಖ್ಯೆ 25346,







ರಾಜ್ಯದಲ್ಲಿ ಇಂದು ಕೊರೋನಾ ಇಳಿಮುಖವಾಗಿದ್ದು, ಕಳೆದ ಏಪ್ರಿಲ್ 15 ನಂತರ ಇದೇ ಮೊದಲ ಬಾರಿಗೆ ಪಾಸಿಟಿವಿಟಿ ದರ ಶೇಕಡ 9.69 ದಾಖಲಾಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 13,800 ಜನರಿಗೆ ಸೋಂಕು ತಗಲಿದೆ. 365 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2,68,275 ಸಕ್ರಿಯ ಪ್ರಕರಣಗಳು ಇವೆ. 

ರಾಜ್ಯದಲ್ಲಿಂದು 25,346 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 23,83,758 ಜನ ಗುಣಮುಖರಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಇಳಿಮುಖವಾಗಿದ್ದು 2686 ಜನರಿಗೆ ಸೋಂಕು ತಗುಲಿದೆ.



ಪಾಸಿಟಿವ್ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು : ಸಿಎಂ

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಿಗೆ ಕಠಿಣ ನಿರ್ಬಂಧ ಸಡಿಲಿಕೆ ಸಂಬಂಧ ಇನ್ನೂ ನಾಲ್ಕೈದು ದಿನಗಳಲ್ಲಿ ಅಧಿಕಾರಿಗಳು ಹಾಗೂ ತಜ್ಞರ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಶನಿವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುದೀರ್ಘ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಲಾಕ್‍ಡೌನ್ ತೆರವುಗೊಳಿಸುವ ಸಂಬಂಧ ಶೀಘ್ರದಲ್ಲೆ ಸರಕಾರ ತೀರ್ಮಾನ ಮಾಡಲಿದೆ ಎಂದರು.


#ನಮ್ಮ ಆರೋಗ್ಯದ ರಕ್ಷಣೆ ನಮ್ಮ ಕೈಯಲ್ಲಿದೆ, #ಮನೆಯಲ್ಲಿ ಆರೋಗ್ಯವಾಗಿರಿ 

Previous Post Next Post